facebook pixel
chevron_right Top
transparent
ಕಾನೂನು ಶಿಕ್ಷಣ ಸಂಸ್ಥೆಗಳು ಸಂಶೋಧನೆಗೆ ಮುಂದಾಗಲಿ
ಜೆನೆಟಿಕ್ ಇಂಜಿನಿಯರಿಂಗ್(ವಂಶವಾಹಿನಿ), ಬಯೋ ಎಥಿಕ್ಸ್ ಮತ್ತು ಕೃತಕ ಬುದ್ಧಿಮತ್ತೆ ವಿಷಯಗಳ ಬಗ್ಗೆ ಕಾನೂನು ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಸಂಶೋಧನೆ ನಡೆಸಿ, ಗುಣಾತ್ಮಕ ಅಂಶಗಳನ್ನು ಅಭಿವೃದ್ಧಿಪಡಿಸಿ ಪಠ್ಯಕ್ರಮದಲ್ಲಿ ಅಳವಡಿಸಿಕೊಳ್ಳಬೇಕು ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ ಸಲಹೆ ನೀಡಿದರು. ಗೋಗಟೆ ಇನ್ಸ್​ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಕರ್ನಾಟಕ ಲಾ ಸೊಸೈಟಿ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೇಂದ್ರ ಸರ್ಕಾರ ನೀಡುತ್ತಿರುವ ಸೌಲಭ್ಯ ಬಳಸಿಕೊಂಡು ಪಠ್ಯಕ್ರಮದ ಸ್ವಾಯತ್ತತೆ ಸಾಧಿಸಬೇಕು ಎಂದು ಶಿಕ್ಷಣ ಸಂಸ್ಥೆಗಳಿಗೆ ರಾಷ್ಟ್ರಪತಿ ಕಿವಿಮಾತು ಹೇಳಿದರು. ದೇಶದ 20 ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಉತ್ಕೃಷ್ಟ ಶಿಕ್ಷಣಸಂಸ್ಥೆ ಎಂಬ ಪ್ರಮಾಣಪತ್ರ ನೀಡಲಾಗಿದೆ. ಈ ಪ್ರಮಾಣಪತ್ರಗಳನ್ನು ಪಡೆದಿರುವ ಶಿಕ್ಷಣಸಂಸ್ಥೆಗಳು ಪಠ್ಯಕ್ರಮ ರಚನೆ ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆಯಲ್ಲಿ ಹೆಚ್ಚಿನ ಸ್ವಾತಂತ್ರ್ಯ ಹೊಂದಿವೆ ಎಂದರು.
For the best experience use Awesummly app on your Android phone
Awesummly Chrome Extension Awesummly Android App