facebook pixel
chevron_right Top
transparent
ಡಿಕೆಶಿ ಸದ್ಯ ನಿರಾಳ
ದೆಹಲಿಯ ಅಪಾರ್ಟ್​ವೆುಂಟ್​ನಲ್ಲಿ ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದ 8.59 ಕೋಟಿ ರೂ.ಗೆ ಸಂಬಂಧಿಸಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದರಿಂದ ಅವರು ಸದ್ಯ ನಿರಾಳರಾಗಿದ್ದಾರೆ. ಪ್ರಕರಣದ ಮೊದಲ ಆರೋಪಿ ಎ1 ಡಿ.ಕೆ. ಶಿವಕುಮಾರ್, ಎ2 ಸುನೀಲ್ ಶರ್ವ, ಎ3 ಆಂಜನೇಯ ಮತ್ತು ಎ4 ರಾಜೇಂದ್ರ ಅವರಿಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಎಸ್. ಆಳ್ವ ಜಾಮೀನು ಮಂಜೂರು ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ. ಜತೆಗೆ 25 ಸಾವಿರ ರೂ. ಶ್ಯೂರಿಟಿ ಮತ್ತು 1 ಲಕ್ಷ ರೂ. ಅಲ್ಲದೆ, ಸಾಕ್ಷಿಗಳ ಮೇಲೆ ಪರಿಣಾಮ ಬೀರಬಾರದು ಮತ್ತು ತನಿಖೆಗೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ. ಶಿವಕುಮಾರ್ ಜಾಮೀನು ಅರ್ಜಿಗೆ ಐಟಿ ಪರ ವಕೀಲ ಎ.ಎ.ಜಿ. ಪ್ರಭುಲಿಂಗ ನಾವಡಗಿ ಆಕ್ಷೇಪಣೆ ವ್ಯಕ್ತಪಡಿಸಿದರು.
For the best experience use Awesummly app on your Android phone
Awesummly Chrome Extension Awesummly Android App