facebook pixel
chevron_right Top
transparent
5 ಉಗ್ರರ ಎನ್​ಕೌಂಟರ್
ಜಮ್ಮು-ಕಾಶ್ಮೀರದ ಕುಲ್ಗಾಂವ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಭದ್ರತಾ ಪಡೆ, ಲಷ್ಕರ್ ಎ ತೊಯ್ಬಾ, ಹಿಜ್ಬುಲ್ ಮುಜಾಹಿದೀನ್ ಸಂಘಟನೆಗೆ ಸೇರಿದ 5 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕಳೆದ ವರ್ಷ ಬ್ಯಾಂಕೊಂದರ ಕ್ಯಾಷ್ ವ್ಯಾನ್ ಮೇಲೆ ದಾಳಿ ನಡೆಸಿ, 7 ಸಿಬ್ಬಂದಿಯನ್ನು ಹತ್ಯೆ ಮಾಡಿದ್ದ ಪ್ರಕರಣದ ಆರೋಪಿಯೂ ದಾಳಿಯಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ರಾತ್ರಿಯೇ ಕಾರ್ಯಾಚರಣೆ ಆರಂಭವಾಗಿತ್ತು. ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆಯ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಬಳಿಕ ಅವರ ಮೇಲೆ ಪ್ರತಿದಾಳಿ ನಡೆಸಲಾಯಿತು. ಈ ಸಂದರ್ಭದಲ್ಲಿ ಕೆಲವು ದುಷ್ಕರ್ವಿುಗಳು ಭದ್ರತಾ ಪಡೆ ಮೇಲೆ ಕಲ್ಲು ತೂರಾಟ ನಡೆಸಿದರು. ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
For the best experience use Awesummly app on your Android phone
Awesummly Chrome Extension Awesummly Android App