facebook pixel
chevron_right Top
transparent
ವಿದೇಶ ಪ್ರವಾಸ ಮುಗಿಸಿ ವಾಪಸಾದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
12 ದಿನದ ಯೂರೋಪ್​ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಮುಂಜಾನೆ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನನಗೆ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿಯೇ ಇಲ್ಲ ಎಂದು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಹೊರಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ವಿದೇಶ ಪ್ರವಾಸ ಚೆನ್ನಾಗಿತ್ತು. ಜಾರಕಿಹೊಳಿ ಸಹೋದರರ ಸಮಸ್ಯೆ ಕುರಿತು ಯಾವುದೇ ಮಾಹಿತಿ ಇಲ್ಲ. ಯಡಿಯೂರಪ್ಪ ಅವರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅಗತ್ಯಬಿದ್ದರೆ ಸಮನ್ವಯ ಸಮಿತಿ ಸಭೆ ಕರೆದು ಚರ್ಚೆ ನಡೆಸುತ್ತೇವೆ ಎಂದು ಹೇಳಿ, ತಮಗೆ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಮಾಹಿತಿಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಅವರು ಪುತ್ರ ಯತೀಂದ್ರ, ತಮ್ಮ ಆಪ್ತ ಗೋವಿಂದರಾಜು ಹಾಗು ಕುಟುಂಬದ ಸದಸ್ಯರೊಂದಿಗೆ ಸೆಪ್ಟೆಂಬರ್​ 3ರಂದು ಯೂರೋಪ್​ ರಾಷ್ಟ್ರಗಳ ಪ್ರವಾಸಕ್ಕೆ ತೆರಳಿದ್ದರು.
For the best experience use Awesummly app on your Android phone
Awesummly Chrome Extension Awesummly Android App