facebook pixel
chevron_right Politics
transparent
ಕೋಲ್ಕತ್ತಾ : ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಆಕಸ್ಮಿಕ
ಕೋಲ್ಕತ್ತಾದ ಪ್ರಮುಖ ವ್ಯಾಪಾರಿ ಕೇಂದ್ರದಲ್ಲಿ ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದೆ. 30 ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿವೆ. ಕೋಲ್ಕತ್ತಾದ ಭಾಗ್ರಿ ಮಾರ್ಕೆಟ್‌ನಲ್ಲಿ ಭಾನುವಾರ ತಡರಾತ್ರಿ 2.30ರ ಸುಮಾರಿಗೆ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಬಹುಹಂತದ ಕಟ್ಟಡದ ಹಲವು ಮಹಡಿಗಳಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಅಗ್ನಿ ಆಕಸ್ಮಿಕದಲ್ಲಿ ಇದುವರೆಗೂ ಯಾವುದೇ ಪ್ರಾಣಹಾನಿಯಾಗಿಲ್ಲ. ಮಾರುಕಟ್ಟೆಯ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ. 30 ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಮಾರುಕಟ್ಟೆಗೆ ಸಂಪರ್ಕ ಕಲ್ಪಿಸುವ ಮೂರು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇನ್ನಷ್ಟು ಕೋಲ್ಕತಾ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
For the best experience use Awesummly app on your Android phone
Awesummly Chrome Extension Awesummly Android App