facebook pixel
chevron_right Top
transparent
ರಾಜೀವ್‌ ಹಂತಕರ ಬಿಡುಗಡೆಗೆ ಮನವಿ ಕೇಂದ್ರಕ್ಕೆ ಕಳುಹಿಸಿಲ್ಲ: ತಮಿಳುನಾಡು ರಾಜ್ಯಪಾಲರು
ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರಕಾರ ಸಲ್ಲಿಸಿರುವ ಶಿಫಾರಸ್ಸನ್ನು ಕೇಂದ್ರ ಸರಕಾರಕ್ಕೆ ವರ್ಗಾವಣೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿಗಳನ್ನು ರಾಜ್ಯಪಾಲ ಬನ್ವಾರಿಲಾಲ್‌ ಪುರೋಹಿತ್‌ ನಿರಾಕರಿಸಿದ್ದಾರೆ. ಈ ವಿಷಯದಲ್ಲಿ ಸಂವಿಧಾನದ ಅನುಸಾರ ನ್ಯಾಯೋಚಿತ ರೀತಿಯಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ. ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಏಳು ಮಂದಿ ಆರೋಪಿಗಳನ್ನು ಬಿಡುಗಡೆ ಮಾಡಬೇಕೆಂದು ತಮಿಳುನಾಡು ಸಚಿವ ಸಂಪುಟ ಸಭೆಯಲ್ಲಿ ಸೆ.9ರಂದು ತೀರ್ಮಾನ ಕೈಗೊಂಡಿತ್ತು. ಬಳಿಕ ಈ ಶಿಫಾರಸನ್ನು ರಾಜ್ಯಪಾಲರಿಗೆ ರವಾನಿಸಲಾಗಿತ್ತು. ಅದನ್ನು ಅವರು ಕೇಂದ್ರ ಸರಕಾರಕ್ಕೆ ಕಳಹಿಸಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಜತೆಗೆ ಕೆಲವು ಸುದ್ದಿವಾಹಿನಿಗಳಲ್ಲೂ ಇದರ ಬಗ್ಗೆ ಚರ್ಚೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಭವನ ಸ್ಪಷ್ಟನೆ ನೀಡಿದೆ.
For the best experience use Awesummly app on your Android phone
Awesummly Chrome Extension Awesummly Android App