facebook pixel
chevron_right Top
transparent
ಪೆಟ್ರೋಲ್​, ಡೀಸೆಲ್​ ಮೇಲಿನ ತೆರಿಗೆ ಇಳಿಕೆಗೆ ಸಿಎಂ ಎಚ್​ಡಿಕೆ ನಿರ್ಧಾರ
ದಿನೇ ದಿನೇ ಪೆಟ್ರೋಲ್​ ಮತ್ತು ಡೀಸೆಲ್​ ಏರಿಕೆಯಾಗುತ್ತಿರುವುದರಿಂದ ಹೈರಾಣಾಗಿರುವ ರಾಜ್ಯದ ಜನತೆಗೆ ಬಂಪರ್​ ಗಿಫ್ಟ್​ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂಧನದ ಮೇಲಿನ ತೆರಿಗೆ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೇ ಸಭೆ ನಡೆಸಿದ್ದು, ಪೆಟ್ರೋಲ್​ ಮತ್ತು ಡೀಸೆಲ್​ ಮೇಲೆ ಪ್ರತೀ ಲೀಟರ್​ಗೆ 2-3 ರೂ. ತೆರಿಗೆ ಇಳಕೆ ಮಾಡಲು ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸೋಮವಾರ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುತ್ತದೆ ಎಂದು ಮೂಲಗಳು ತಿಳಿಸಿವೆ. ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆಯ ಬಿಸಿಯನ್ನು ಕಡಿಮೆ ಮಾಡಲು ಈಗಾಗಲೇ ರಾಜಸ್ಥಾನ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ತೆರಿಗೆಯನ್ನು ಕಡಿತ ಮಾಡಿವೆ.
For the best experience use Awesummly app on your Android phone
Awesummly Chrome Extension Awesummly Android App