facebook pixel
chevron_right Top
transparent
ಅನಾರೋಗ್ಯದಿಂದ ಮೃತಪಟ್ಟ ವ್ಯಕ್ತಿ: ಮನನೊಂದು ತಾಯಿ, ಪತ್ನಿ ಆತ್ಮಹತ್ಯೆ
ಸಿಲಿಕಾನ್​ ಸಿಟಿಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಷ ಎಂಬ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಪತ್ನಿ ಹಾಗೂ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೇಷ ಅವರ ಪತ್ನಿ ಉಷಾ ಹಾಗೂ ಅವರ ತಾಯಿ ಸುಧಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಮುತ್ಯಾಲನಗರದಲ್ಲಿ ಘಟನೆ ನಡೆದಿದ್ದು, ಇಬ್ಬರೂ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಮೂವರ ಮೃತದೇಹಗಳನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
For the best experience use Awesummly app on your Android phone
Awesummly Chrome Extension Awesummly Android App