facebook pixel
chevron_right Top
transparent
ಜೆಡಿಯುಗೆ ಸೇರ್ಪಡೆಯಾದ ಚುನಾವಣಾ ಚಾಣಕ್ಯ ಪ್ರಶಾಂತ್​ ಕಿಶೋರ್​
ಬಿಜೆಪಿ, ಜೆಡಿ(ಯು) ಮತ್ತು ಕಾಂಗ್ರೆಸ್‌ ಪಕ್ಷದಲ್ಲಿ ಚುನಾವಣಾ ತಂತ್ರಗಾರರಾಗಿ ಕಾರ್ಯನಿರ್ವಹಿಸಿದ್ದ ಪ್ರಶಾಂತ್‌ ಕಿಶೋರ್‌ ಅವರು ಇಂದು ಜನತಾದಳ (ಯು) ಪಕ್ಷಕ್ಕೆ ಸೇರ್ಪಡೆಯಾಗಿದ್ದು, ರಾಜಕೀಯದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ. ಭಾನುವಾರ ಪಟನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿ(ಯು) ವರಿಷ್ಠ ನಿತೀಶ್​ ಕುಮಾರ್​ ಅವರು ಪ್ರಶಾಂತ್​ ಕಿಶೋರ್​ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಕಳೆದ ವಾರ ಹೈದರಾಬಾದ್‌ನ ಇಂಡಿಯನ್‌ ಸ್ಕೂಲ್‌ ಆಫ್ ಬ್ಯುಸಿನೆಸ್‌ನಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪ್ರಶಾಂತ್‌ ಕಿಶೋರ್‌ ತಾವು ರಾಜಕೀಯದಲ್ಲಿ ಹೊಸ ಹೆಜ್ಜೆ ಇಡುತ್ತಿರುವ ಕುರಿತು ಸುಳಿವು ನೀಡಿದ್ದರು. ಆದರೆ ತಾವು ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿರಲಿಲ್ಲ. ಈಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ನಿತೀಶ್​ ಕುಮಾರ್​ ಅವರ ಜತೆ ಕೈಜೋಡಿಸಿದ್ದಾರೆ. ಈ ಮೂಲಕ ಅವರು ಬಿಹಾರದಿಂದ ಚುನಾವಣೆಗೆ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
For the best experience use Awesummly app on your Android phone
Awesummly Chrome Extension Awesummly Android App