facebook pixel
chevron_right Politics
transparent
ಸಿದ್ದರಾಮಯ್ಯ ವಾಪಸ್, ಕಾಂಗ್ರೆಸ್‌ನಲ್ಲಿ ಬಿರುಸಿನ ಚಟುವಟಿಕೆ!
ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಸಿದ್ದರಾಮಯ್ಯ ಬರುತ್ತಿದ್ದಂತೆ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. 12 ದಿನಗಳ ವಿದೇಶ ಪ್ರವಾಸದ ಬಳಿಕ ಸಿದ್ದರಾಮಯ್ಯ ಭಾನುವಾರ ಮುಂಜಾನೆ 2.30ರ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದರು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹಲವಾರು ಕಾರ್ಯಕರ್ತರು ಅವರನ್ನು ಬರಮಾಡಿಕೊಂಡರು. ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು,'ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿಗಳನ್ನು ಪಡೆದುಕೊಂಡ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ' ಎಂದು ಹೇಳಿದರು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಸಹ ಬೆಂಗಳೂರಿಗೆ ಬಂದಿದ್ದು, ಸರಣಿ ಸಭೆಗಳು ನಡೆಯುತ್ತಿವೆ. ಸಿದ್ದರಾಮಯ್ಯ ಅವರು ವಾಪಸ್ ಆದ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ, ವಿವಿಧ ಜಿಲ್ಲೆಗಳ ಪ್ರವಾಸದಲ್ಲಿದ್ದ ನಾಯಕರು ಬೆಂಗಳೂರಿಗೆ ಆಗಮಿಸಿದ್ದಾರೆ.
For the best experience use Awesummly app on your Android phone
Awesummly Chrome Extension Awesummly Android App