facebook pixel
chevron_right Top
transparent
ಮೋದಿಯನ್ನು ಪ್ರಧಾನಿ ಮಾಡಲು ನೆರವಾಗಿದ್ದ ಪ್ರಶಾಂತ್ ಕಿಶೋರ್ ಜೆಡಿಯು ತೆಕ್ಕೆಗೆ
ಮೋದಿಯನ್ನು ಪ್ರಧಾನಿ ಮಾಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್ ಜೆಡಿಯುಗೆ ಸೇರ್ಪಡೆಯಾಗಿದ್ದಾರೆ. ಬಿಹಾರದ ಪಟನಾದಲ್ಲಿ ನಡೆದ ಜೆಡಿಯು ಪಕ್ಷದ ಸಭೆಯಲ್ಲಿ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್‌ರನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ತಮ್ಮ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. 2014ರ ಲೋಕಸಭಾ ಚುನಾವಣೆಯಲ್ಲಿ ಮೋದಿಯನ್ನು ಗೆಲ್ಲಿಸಲು ಚುನಾವಣಾ ರಣತಂತ್ರಜ್ಞ ಪ್ರಶಾಂತ್ ಕಿಶೋರ್ ಪ್ರಮುಖ ಪಾತ್ರ ವಹಿಸಿದ್ದರು. ಬಳಿಕ, ಬಿಜೆಪಿ ಜತೆಗಿನ ಸಖ್ಯ ತೊರೆದು ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಮಹಾಮೈತ್ರಿಕೂಟವನ್ನು ಗೆಲ್ಲಿಸಲು ಸಹಾಯ ಮಾಡಿದ್ದರು. ಆ ವೇಳೆ ಎನ್‌ಡಿಎ ತೊರೆದಿದ್ದ ನಿತೀಶ್‌ ಕುಮಾರ್‌ರನ್ನು ಮತ್ತೆ ಸಿಎಂ ಮಾಡಲು ಮಹಾಮೈತ್ರಿಕೂಟಕ್ಕೆ ನೆರವಾಗಿದ್ದರು. ಬಳಿಕ ಜೆಡಿಯುಗೆ ರಾಜಕೀಯ ಸಲಹೆಗಾರರಾಗಿದ್ದ ಪ್ರಶಾಂತ್ ಕಿಶೋರ್ ಪಕ್ಷದ ಆಪ್ತ ವಲಯಗಳಲ್ಲಿ ಗುರುತಿಸಿಕೊಂಡಿದ್ದರು. ಈಗ, ಜನತಾದಳ ಯು ನಿತೀಶ್‌ ಬಣದೊಂದಿಗೆ ಸೇರಿಕೊಳ್ಳುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದಾರೆ.
For the best experience use Awesummly app on your Android phone
Awesummly Chrome Extension Awesummly Android App