facebook pixel
chevron_right Politics
transparent
ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ
ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಮುಂದುವರೆಯಲಿದೆ. ಉಪ ಚುನಾವಣೆ, ನಾಮ ನಿರ್ದೇಶನ ಸೇರಿ 6 ಸ್ಥಾನಗಳು ತೆರವಾಗಿದ್ದು, 4 ಸ್ಥಾನ ಕಾಂಗ್ರೆಸ್‌ಗೆ ಸಿಗಲಿವೆ. ಪಕ್ಷ ಪರಿಷತ್ ಸದಸ್ಯರ ಪಟ್ಟಿಯನ್ನು ಸಿದ್ಧಗೊಳಿಸಿದೆ. ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ. ಪಟ್ಟಿ ಹಿಡಿದು ದೆಹಲಿಗೆ ತೆರಳಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸಲಿದ್ದಾರೆ. ಅಕ್ಟೋಬರ್ 3ರಂದು ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 3 ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಿಗದಿಯಾಗಿದೆ. ತಾರಾ ಅನುರಾಧ ಮತ್ತು ಕೆ.ಬಿ.ಶಾಣಪ್ಪ ಅವರ ಅವಧಿ ಮುಗಿದ ಹಿನ್ನಲೆಯಲ್ಲಿ 2 ಸ್ಥಾನ ತೆರವಾಗಿದೆ. ಒಬ್ಬರನ್ನು ಸರ್ಕಾರ ನಾಮ ನಿರ್ದೇಶನ ಮಾಡಬೇಕಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲು ಎರಡು ಪಕ್ಷಗಳು ಬಯಸಿವೆ.
For the best experience use Awesummly app on your Android phone
Awesummly Chrome Extension Awesummly Android App