facebook pixel
chevron_right Politics
transparent
ಮೋದಿ ಗೆಲುವ ಹಿಂದಿದ್ದ 'ಆ ವ್ಯಕ್ತಿ' ನಿತೀಶ್ ಕುಮಾರ್ ಜೆಡಿಯು ಸೇರ್ಪಡೆ
ರಾಜಕೀಯ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಭಾನುವಾರದಂದು ಅಧಿಕೃತವಾಗಿ ಜೆಡಿಯು ಸೇರಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಉಪಸ್ಥಿತಿಯಲ್ಲಿ ಪಾಟ್ನಾದಲ್ಲಿ ಪ್ರಶಾಂತ್ ಕಿಶೋರ್ ಜೆಡಿಯುಗೆ ಸೇರ್ಪಡೆಗೊಂಡಿದ್ದಾರೆ. ಭಾರತದ ರಾಜಕಾರಣದಲ್ಲಿ ಮಿಂಚುವ ಮುನ್ನ ಪ್ರಶಾಂತ್ ಕಿಶೋರ್ ವಿಶ್ವಸಂಸ್ಥೆ ಜತೆಗೆ ಕೆಲಸ ಮಾಡಿದ್ದರು. 2012ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಚುನಾವಣೆ ಎದುರಿಸುವಾಗ ಪ್ರಶಾಂತ್ ಕಿಶೋರ್ ಬಿಜೆಪಿಗಾಗಿ ಕೆಲಸ ಮಾಡಿದ್ದರು. ಅದಾಗಿ ಎರಡು ವರ್ಷಗಳ ನಂತರ ಸಿಟಿಜನ್ಸ್ ಫಾರ್ ಅಕೌಂಟಬಲ್ ಗವರ್ನೆನ್ಸ್ ಅಥವಾ ಸಿಎಜಿಯನ್ನು ರೂಪಿಸಿದರು. ಭಾರತದ ರಾಜಕಾರಣದಲ್ಲಿ ಬದಲಾವಣೆ ತರಬೇಕು ಎಂಬ ಉತ್ಸಾಹದಲ್ಲಿರುವ ಯುವ ವೃತ್ತಿಪರರು ಆ ತಂಡದಲ್ಲಿದ್ದಾರೆ.
For the best experience use Awesummly app on your Android phone
Awesummly Chrome Extension Awesummly Android App