facebook pixel
chevron_right Technology
transparent
ಟ್ವಿಟರ್ ಟ್ರೋಲ್: ಪೆಟ್ರೋಲ್ ಬೆಲೆ ರೂ.99.99 ದಾಟಲ್ಲ ಚಾಲೆಂಜ್...!
ಭಾರತದಲ್ಲಿ ಸದ್ಯ ಹೆಚ್ಚಿನ ಪ್ರಮಾಣದಲ್ಲಿ ಸದ್ದು ಮಾಡುತ್ತಿರುವುದು ಪೆಟ್ರೋಲ್ ಬೆಲೆ ಏರಿಕೆ. ದಿನದಿಂದ ದಿನಕ್ಕೆ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಪೆಟ್ರೋಲ್ ಬೆಲೆ ಟ್ವಿಟರ್‌ನಲ್ಲಿ ಸಾಕಷ್ಟು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇದೇ ಮಾದರಿಯಲ್ಲಿ ಕಾಲೆಳೆಯುವ ಸಲುವಾಗಿ ಭಾರತದಲ್ಲಿ ಪೆಟ್ರೋಲ್ ಬೆಲೆ ರೂ.99.99 ದಾಟಲ್ಲ ಎಂದು ಟ್ವಿಟರ್‌ನಲ್ಲಿ ಹೊಸ ಚಾಲೆಂಜ್ ಅನ್ನು ಶುರು ಮಾಡಿದ್ದಾರೆ. ಇದಕ್ಕೆ ಕಾರಣ ಸಹ ಇದೆ. ಸದ್ಯ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೆಟ್ರೋಲ್ ಪಂಪ್‌ಗಳಲ್ಲಿ ಪೆಟ್ರೋಲ್‌/ಡೀಸೆಲ್‌ ದರವನ್ನು 99.99ಕ್ಕಿಂತ ಹೆಚ್ಚು ಸಂಖ್ಯೆಯನ್ನು ತೋರಿಸುವ ಸಾಮಾರ್ಥ್ಯವನ್ನು ಹೊಂದಿಲ್ಲ ಎನ್ನಲಾಗಿದೆ. ಇದನ್ನು ತಿಳಿದ ಕೆಲವರು ಟ್ವಿಟರ್‌ನಲ್ಲಿ ಈ ಕುರಿತು ಕಾಲೆಳೆಯುತ್ತಿದ್ದಾರೆ. ಇದಕ್ಕಾಗಿ ಭಾರತದಲ್ಲಿ ಪೆಟ್ರೋಲ್ ಬೆಲೆ ರೂ.99.99 ದಾಟಲ್ಲ ಎಂದು ಟ್ವಿಟರ್‌ನಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ತಂತ್ರಜ್ಞಾನ ಮಾಹಿತಿಗಾಗಿ ಕನ್ನಡ ಗಿಜ್‌ಬಾಟ್ ಫೇಸ್‌ಬುಕ್ ಪೇಜ್ ಲೈಕ್ ಮಾಡಿ.
For the best experience use Awesummly app on your Android phone
Awesummly Chrome Extension Awesummly Android App