facebook pixel
chevron_right Top
transparent
ಅತ್ಯಾಚಾರಿಯನ್ನು ಸೇನೆಯಲ್ಲಿ ಮುಂದುವರಿಯಲು ಬಿಡುವುದಿಲ್ಲ: ಸೇನಾ ಮುಖ್ಯಸ್ಥ
ಸಿಬಿಎಸ್ಇ ಟಾಪರ್​ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತೊಡಗಿದ್ದ ಸೇನಾ ಸಿಬ್ಬಂದಿಯನ್ನು ಸೆರೆ ಹಿಡಿಯಲು ನಾವು ಸಹಕರಿಸುತ್ತೇವೆ. ಅಪರಾಧಿಗಳಿಗೆ ನಾವು ಸೇನೆಯಲ್ಲಿ ಮುಂದುವರಿಯಲು ಅವಕಾಶ ನೀಡುವುದಿಲ್ಲ ಎಂದು ಸೌತ್​ ವೆಸ್ಟರ್ನ್​ ಕಮ್ಯಾಂಡ್​ನ ಮುಖ್ಯಸ್ಥ ಲೆಫ್ಟಿನೆಂಟ್​ ಜೆನರಲ್​ ಚೆರಿಶ್​ ಮ್ಯಾಥ್ಸನ್​ ತಿಳಿಸಿದ್ದಾರೆ. ಪ್ರಕರಣದ ಕುರಿತು ಮಾತನಾಡಿ, ಪ್ರಕರಣದಲ್ಲಿ ಆರೋಪಿಯಾಗಿರುವ ಭಾರತೀಯ ಯೋಧನನ್ನು ಬಂಧಿಸಲು ನಾವು ಸಂಪೂರ್ಣ ಸಹಕಾರ ನೀಡುತ್ತೇವೆ ಎಂದಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ್ದ ಹರಿಯಾಣ ಮುಖ್ಯಮಂತ್ರಿ ಮನೋಹರ್​ಲಾಲ್​ ಖಟ್ಟರ್​, ರೆವಾರಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಮೂವರು ಪ್ರಮುಖ ಆರೋಪಿಗಳನ್ನು ಗುರುತಿಸಲಾಗಿದ್ದು, ದುರಾದೃಷ್ಟವಶಾತ್​ ಮೂವರೂ ಸಂತ್ರಸ್ತೆಗೆ ಪರಿಚಿತರೇ ಆಗಿದ್ದಾರೆ. ಈ ಘಟನೆಯಲ್ಲಿ ಮತ್ತೊಂದು ದುರದೃಷ್ಟಕರ ಸಂಗತಿಯೆಂದರೆ ಪ್ರಮುಖ ಆರೋಪಿಗಳಲ್ಲೊಬ್ಬ ಭಾರತೀಯ ಯೋಧ. ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು. ಆರೋಪಿಯನ್ನು ಪತ್ತೆ ಹಚ್ಚಲು ಮಾಹಿತಿ ನೀಡಿದರೆ ಒಂದು ಲಕ್ಷ ರೂ.
For the best experience use Awesummly app on your Android phone
Awesummly Chrome Extension Awesummly Android App