facebook pixel
chevron_right Politics
transparent
ಅಮೆರಿಕಕ್ಕೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಇಳಿಮುಖ
ಅಮೆರಿಕಕ್ಕೆ ಭೇಟಿ ನೀಡುವ ಭಾರತೀಯ ಪ್ರವಾಸಿಗರು ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಕಳೆದ 8 ವರ್ಷಗಳಿಗೆ ಹೋಲಿಕೆ ಮಾಡಿದರೆ ಇದೇ ಮೊದಲ ಬಾರಿಗೆ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಅಮೆರಿಕದ ರಾಷ್ಟ್ರೀಯ ಪ್ರವಾಸ ಮತ್ತು ವಾಣಿಜ್ಯ ಕಚೇರಿ (ಎನ್‌ಟಿಟಿಓ) ವರದಿ ಈ ಕುರಿತು ಅಂಕಿ-ಅಂಶಗಳನ್ನು ನೀಡಿದೆ. ಅಮೆರಿಕಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಶೇ 5ರಷ್ಟು ಇಳಿಮುಖವಾಗಿದೆ ಎನ್ನುತ್ತದೆ ಅಂಕಿ-ಅಂಶ. 2016ರಲ್ಲಿ 11.72 ರಷ್ಟು ಪ್ರವಾಸಿಗರು, 2017ರಲ್ಲಿ 11.14 ರಷ್ಟು ಭಾರತೀಯರು ಅಮೆರಿಕಕ್ಕೆ ಪ್ರವಾಸಕ್ಕಾಗಿ ಭೇಟಿ ನೀಡಿದ್ದರು. 2009ರಲ್ಲಿ 5.5 ಲಕ್ಷ ಜನರು ಭೇಟಿ ಕೊಟ್ಟಿದ್ದರು. 2008ಕ್ಕೆ ಹೋಲಿಕೆ ಮಾಡಿದರೆ ಇದು ಶೇ 8ರಷ್ಟು ಕಡಿಮೆಯಾಗಿತ್ತು. ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖ ಕೇವಲ ತಾತ್ಕಾಲಿಕ. 2018 ರಿಂದ 2022ರ ತನಕ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ ಎಂದು ಎನ್‌ಟಿಟಿಓ ನಿರೀಕ್ಷಿಸಿದೆ.
For the best experience use Awesummly app on your Android phone
Awesummly Chrome Extension Awesummly Android App