facebook pixel
chevron_right Sports
transparent
ಮಿಥಾಲಿ ರಾಜ್‌ ಶತಕ ವ್ಯರ್ಥ
ನಾಯಕಿ ಮಿಥಾಲಿ ರಾಜ್‌ (125) ವೃತ್ತಿ ಜೀವನದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದರೂ ಭಾರತಕ್ಕೆ ಗೆಲುವು ಸಿಗಲಿಲ್ಲ. ಐಸಿಸಿ ಮಹಿಳಾ ಚಾಂಪಿಯನ್‌ಷಿಪ್‌ 3ನೇ ಹಂತದಲ್ಲಿ ಸ್ಪರ್ಧಿಸುತ್ತಿರುವ ಭಾರತ ಮಹಿಳಾ ತಂಡ ಆತಿಥೇಯ ಶ್ರೀಲಂಕಾ ವಿರುದ್ಧದ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ 3 ವಿಕೆಟ್‌ಗಳ ಸೋಲನುಭವಿಸಿದೆ. ಆದರೆ, ಮೊದಲೆರಡು ಪಂದ್ಯಗಳನ್ನು ಜಯಿಸಿದ್ದ ಮಿಥಾಲಿ ಬಳಗ 2-1ರಲ್ಲಿ ಸರಣಿ ಗೆದ್ದುಕೊಂಡಿದೆ. ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ, ಮಿಥಾಲಿ ಮತ್ತು ಸ್ಮೃತಿ ಮಂಧನಾ (51) ಅವರ ಉತ್ತಮ ಬ್ಯಾಟಿಂಗ್‌ ನೆರವಿನಿಂದ 50 ಓವರ್‌ಗಳಲ್ಲಿ 5 ವಿಕೆಟ್‌ಗೆ 253 ರನ್‌ ಕಲೆಹಾಕಿತು.
For the best experience use Awesummly app on your Android phone
Awesummly Chrome Extension Awesummly Android App