facebook pixel
chevron_right Top
transparent
ಬಿಎಂಟಿಸಿ ಚಾಲಕರಿನ್ನು ಮೊಬೈಲ್ ಬಳಸುವಂತಿಲ್ಲ
ಬಸ್ ಚಾಲಕರು ಕರ್ತವ್ಯದ ವೇಳೆ ಮೊಬೈಲ್ ಬಳಸುವುದು ಮತ್ತು ತಮ್ಮ ಬಳಿ ಇಟ್ಟುಕೊಳ್ಳುವುದನ್ನು ಬಿಎಂಟಿಸಿ ನಿರ್ಬಂಧಿಸಿದ್ದು, ನ.15ರಿಂದ ಆದೇಶ ಜಾರಿಗೆ ಬರಲಿದೆ. ಬಸ್ ಚಲಾಯಿಸುವಾಗ ಮೊಬೈಲ್​ನಲ್ಲಿ ಮಾತನಾಡುವುದು, ಬಳಸುವುದು ಅಪಾಯಕಾರಿ ಎಂದು ತಿಳಿದಿದ್ದರೂ ಚಾಲಕರು ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ. 15ರ ನಂತರ ಚಾಲಕರು ಕರ್ತವ್ಯದ ವೇಳೆ ಮೊಬೈಲ್ ಬಳಸುವುದು ಕಂಡುಬಂದಲ್ಲಿ ಸೇವೆಯಿಂದ ಅಮಾನತುಗೊಳಿಸುವ ಎಚ್ಚರಿಕೆಯನ್ನು ಬಿಎಂಟಿಸಿ ನೀಡಿದೆ. ನಿರ್ವಾಹಕರು ಕರ್ತವ್ಯದ ವೇಳೆ ಮೊಬೈಲ್ ಬಳಸುವಂತಿಲ್ಲ. ಆದರೆ, ತಮ್ಮ ಬಳಿ ಮೊಬೈಲ್ ಇರಿಸಿಕೊಳ್ಳಬಹುದು ಎಂದು ತಿಳಿಸಿದೆ.
For the best experience use Awesummly app on your Android phone
Awesummly Chrome Extension Awesummly Android App