facebook pixel
chevron_right Politics
transparent
ಇಂದು ಟಿಪ್ಪು ಜಯಂತಿ: ಪ್ರತಿಭಟನೆ, ನಿಷೇಧಾಜ್ಞೆ, ಕೊಡಗು ಬಂದ್
ವಿಪಕ್ಷ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಇಂದು (ನ.10) ರಾಜ್ಯದಾದ್ಯಂತ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ. ಕೊಡಗು, ಮಂಗಳೂರು, ಮಂಡ್ಯ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕೊಡಗಿನಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಇದಕ್ಕೆ ಬಿಜೆಪಿ ಬೆಂಬಲ ವ್ಯಕ್ತಪಡಿಸಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಜಿಲ್ಲೆಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಭಾನುವಾರ ಬೆಳಿಗೆ 6 ಗಂಟೆವರೆಗೂ ಸಾರ್ವಜನಿಕರು ಗುಂಪುಗೂಡುವುದು, ಪ್ರತಿಭಟನೆ, ಮೆರವಣಿಗೆಗಳನ್ನು ನಡೆಸುವುದನ್ನು ನಿರ್ಬಂಧಿಸಲಾಗಿದೆ. ಮದ್ಯ ಮಾರಾಟಕ್ಕೂ ನಿಷೇಧ ವಿಧಿಸಲಾಗಿದೆ. ದಕ್ಷಿಣ ವಲಯ ಐಜಿಪಿ ಕೆ.ವಿ. ಶರತ್‌ಚಂದ್ರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 50ಕ್ಕೂ ಹೆಚ್ಚು ಕಡೆ ಚೆಕ್‌ ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಗೆ ಪ್ರವೇಶಿಸುವ ಪ್ರತಿ ವಾಹನಗಳನ್ನೂ ಪರಿಶೀಲಿಸಿ ಬಿಡಲಾಗುತ್ತಿದೆ.
For the best experience use Awesummly app on your Android phone
Awesummly Chrome Extension Awesummly Android App