facebook pixel
chevron_right Top
transparent
ಸಂಪುಟ ವಿಸ್ತರಣೆ ಪ್ರಸವ ವೇದನೆಗೆ ಕೊನೆ ಎಂದು? ಕೂಡ ಬಾರದ ಮುಹೂರ್ತ
ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಗಾಗಿ ಕಾಂಗ್ರೆಸ್ ಜೆಡಿಎಸ್ ಮುಖಂಡರು ಕಾತುರದಿಂದ ಬಕ ಪಕ್ಷಿಯಂತೆ ಕಾಯುತ್ತಿದ್ದರೆ ಇನ್ನೊಂದೆಡೆ ಸಂಪುಟ ವಿಸ್ತರಣೆ ಆಗಬೇಕೆ? ಬೇಡವೇ ಎಂಬ ಜಿಜ್ಞಾಸೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಲ್ಲಿ ಮೂಡಿದೆ. ಈಗಾಗೇ ಹಲವು ಬಾರಿ ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿ ನೇಮಕ ಪರಿಷತ್ ಅಧ್ಯಕ್ಷರ ನೇಮಕ ಸೇರಿದಂತೆ ಎಲ್ಲಾ ಪ್ರಕ್ರಿಯೆಯನ್ನು ಒಂದಲ್ಲಾ ಒಂದು ಕಾರಣ ಹೇಳಿ ಮುಂದೂಡಲಾಗುತ್ತಿದೆ. ಸಂಪುಟ ವಿಸ್ತರಣೆ: ಸಿದ್ದರಾಮಯ್ಯ-ಪರಮೇಶ್ವರ್‌ ನಡುವೆ ಮಹತ್ವದ ಮಾತುಕತೆ ನಿಜವಾಗಿಯೂ ಸಮ್ಮಿಶ್ರ ಸರ್ಕಾರಕ್ಕೆ ಸಂಪುಟ ವಿಸ್ತರಣೆ ಮಾಡುವ ಆಲೋಚನೆ ಇದೆಯಾ ಎನ್ನುವ ಪ್ರಶ್ನೆ ಕಾಡುತ್ತಿದೆ. ನವೆಂಬರ್ 12ರ ನಂತರ ಕಾಂಗ್ರೆಸ್ ನ ಪ್ರಮುಖ ನಾಯಕರು ಸಭೆ ಸೇರಿ ಮುಂದಿನ ನಡೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಉನ್ನತ ಮೂಲಗಳು ಹೇಳಿವೆ.
For the best experience use Awesummly app on your Android phone
Awesummly Chrome Extension Awesummly Android App