facebook pixel
chevron_right Top
transparent
ಹಣ ವಂಚನೆ ಪ್ರಕರಣ: ಸಿಸಿಬಿ ಕಚೇರಿಯತ್ತ ಜನಾರ್ದನ ರೆಡ್ಡಿ
ಬಹುಕೋಟಿ ಚಿಟ್ ಫಂಡ್ ಹಗರಣದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಸಿಸಿಬಿ ಪೊಲೀಸರ ಮುಂದೆ ಹಾಜರಾಗುವ ಸಾಧ್ಯತೆ ಇದೆ. ಜನಾರ್ದನ ರೆಡ್ಡಿ ಅವರು ವಕೀಲ ಆರ್.ಪಿ. ಚಂದ್ರಶೇಖರ್ ಜತೆ ಸಿಸಿಬಿ ಕಚೇರಿಗೆ ಹಾಜರಾಗಲು ಹೊರಟಿದ್ದು, ವಿಚಾರಣೆಗೆ ಒಳಪಡುವ ನಿರೀಕ್ಷೆಯಿದೆ. ಜನಾರ್ದನ ರೆಡ್ಡಿಗೆ ಆಂಬಿಡೆಂಟ್ 20 ಕೋಟಿ ಕೊಟ್ಟಿದ್ದೇಕೆ? ಡೀಟೇಲ್ಸ್ ಇಲ್ಲಿದೆ ಆಂಬಿಡೆಂಟ್ ಮಾರ್ಕೆಟಿಂಗ್ ಪ್ರೈ. ಲಿಮಿಟೆಡ್ ಕಂಪೆನಿಯ ಮಾಲೀಕ ಫರೀದ್ ಗೆ ಸಹಾಯ ಮಾಡಲು ಜನಾರ್ದನ ರೆಡ್ಡಿ ವಾಮಮಾರ್ಗ ಅನುಸರಿಸಿದ್ದರು ಎಂಬ ಆರೋಪದಡಿ ಸಿಸಿಬಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇನ್ನೂ ಪೂರ್ಣಗೊಂಡಿಲ್ಲ. ಭಾನುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಹೀಗಾಗಿ ವಾರದಿಂದ ಕಾಣಿಸಿಕೊಳ್ಳದ ಜನಾರ್ದನ ರೆಡ್ಡಿ, ಪೊಲೀಸರ ಮುಂದೆ ಹಾಜರಾಗುವುದು ಅನಿವಾರ್ಯವಾಗಿದೆ.
For the best experience use Awesummly app on your Android phone
Awesummly Chrome Extension Awesummly Android App