facebook pixel
chevron_right Top
transparent
ನಾನು ಇಂದು ಸಿಸಿಬಿ ಕಚೇರಿಗೆ ಹೋಗುತ್ತೇನೆ: ಜನಾರ್ದನ ರೆಡ್ಡಿ
ಆಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ನಾಲ್ಕು ದಿನಗಳ ಬಳಿಕ ಮಾಧ್ಯಮಗಳಿಗೆ ವಿಡಿಯೋ ಸಂದೇಶ ಕಳುಹಿಸುತ್ತಿದ್ದು, ತಾವು ಇಂದು ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಮಾಧ್ಯಮಗಳಿಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಜರ್ನಾರ್ದನ ರೆಡ್ಡಿ ಅವರು ತಮ್ಮ ವಕೀಲ ಚಂದ್ರಶೇಖರ್​ ಅವರೊಂದಿಗೆ ಕಾಣಿಸಿಕೊಂಡಿದ್ದು, ತಮ್ಮ ವಿರುದ್ಧದ ಆರೋಪ ಸುಳ್ಳು, ಕಳೆದ 15-20 ದಿನಗಳಿಂದ ಬೆಂಗಳೂರಿನ ನನ್ನ ಮನೆ ಸುತ್ತ ಆತಂಕದ ವಾತಾವರಣ ಸೃಷ್ಟಿ ಮಾಡಲಾಗಿದೆ. ನನ್ನ ವಿರುದ್ಧ ತಪ್ಪು ಮಾಹಿತಿ ಕೊಡುತ್ತಿದ್ದಾರೆ. ನಾನು ಎಲ್ಲೂ ಹೋಗಿಲ್ಲ, ಬೆಂಗಳೂರಿನಲ್ಲೇ ಇದ್ದೇನೆ. ಪೊಲೀಸರು ಪೂರ್ವಗ್ರಹ ಪೀಡಿತರಾಗಿ ವರ್ತಿಸುತ್ತಿದ್ದಾರೆ. ಸಿಸಿಬಿ ಪೊಲೀಸರು ನಿನ್ನೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿದ್ದಾರೆ. ಅದರಂತೆ ಇಂದು ನಾನು ವಿಚಾರಣೆಗೆ ಹಾಜರಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.
For the best experience use Awesummly app on your Android phone
Awesummly Chrome Extension Awesummly Android App